ಬಾಳುವಂತ ಹೂವೆ - The Indic Lyrics Database

ಬಾಳುವಂತ ಹೂವೆ

गीतकार - Hamsalekha | गायक - Dr. Rajkumar | संगीत - Hamsalekha | फ़िल्म - Aakasmika | वर्ष - 1993

Song link

View in Roman

ಬಾಳುವಂತ ಹೂವೆ ಬಾಡುವ ಆಸೆ ಏಕೆ

ಬಾಳುವಂತ ಹೂವೆ ಬಾಡುವಾಸೆ ಏಕೆ
ಹಾಡುವಂತ ಕೋಗಿಲೆ ಅಳುವ ಆಸೆ ಏಕೆ

ಕವಲುದಾರಿಯಲ್ಲಿ ಬಾಳು ಸಾಧ್ಯವೆ
ಅವಳಿ ದೋಣಿ ಮೇಲೆ ಯಾನ ಯೋಗ್ಯವೇ

ಬಾಳುವಂತ ಹೂವೆ ಬಾಡುವ ಆಸೆ ಏಕೆ
ಹಾಡುವಂತ ಕೋಗಿಲೆ ಅಳುವ ಆಸೆ ಏಕೆ

ಯಾರಿಗಿಲ್ಲ ನೋವು, ಯಾರಿಗಿಲ್ಲ ಸಾವು
ವ್ಯರ್ಥ ವ್ಯಸನದಿಂದ ಸಿಹಿಯೂ ಕೂಡ ಬೇವು

ಬಾಳು ಒಂದು ಸಂತೆ, ಸಂತೆ ತುಂಬಾ ಚಿಂತೆ
ಮದ್ಯ ಮನಗಳಿಂದ ಚಿಂತೆ ಬೆಳೆವುದಂತೆ

ಅಂಕೆ ಇರದ ಮನಸನು ಡಂಡಿಸುವುದು ನ್ಯಾಯ
ಮೂಖ ಮುಗ್ಧ ದೇಹವ ಹಿಂಸಿಸುವುದು ಹೇಯ
ಸಣ್ಣ ಬಿರುಕು ಸಾಲದೆ ತುಂಬು ದೋಣಿ ತಳ ಸೇರಲು
ಸಣ್ಣ ಅಳುಕು ಸಾಲದೆ ತುಂಬು ಬದುಕು ಬರಡಾಗಲು

ಬಾಳುವಂತ ಹೂವೆ ಬಾಡುವ ಆಸೆ ಏಕೆ
ಹಾಡುವಂತ ಕೋಗಿಲೆ ಅಳುವ ಆಸೆ ಏಕೆ

ಬಾಳ ಕದನದಲ್ಲಿ, ಭರವಸೆಗಳು ಬೇಕು
ನಾಳೆ ನನ್ನದೆನ್ನುವ, ನಂಬಿಕೆಗಳು ಬೇಕು

ಜೀವರಾಶಿಯಲ್ಲಿ ಮಾನವರಿಗೆ ಆದ್ಯತೆ
ನಾವೆ ಮೂಢರಾದರೆ ಜ್ಞಾನಕೆಲ್ಲಿ ಪೂಜ್ಯತೆ

ಇಲ್ಲಿ ಈಸಬೇಕು, ಇದ್ದು ಜಯಿಸಬೇಕು
ನಾಗರಿಕರಾದಮೇಲೆ ಸುಗುಣರಾಗಬೇಕು
ನಿನ್ನ ಹಳದಿ ಕಣ್ಣಲಿ ಜನರನೇಕೆ ನೀ ನೋಡುವೆ
ಮನದ ಡೊಂಕು ಕಾಣದೆ ಜಗವನೇಕೆ ನೀ ದೂರುವೆ

ಬಾಳುವಂತ ಹೂವೆ ಬಾಡುವ ಆಸೆ ಏಕೆ
ಹಾಡುವಂತ ಕೋಗಿಲೆ ಅಳುವ ಆಸೆ ಏಕೆ

ಕವಲು ದಾರಿಯಲ್ಲಿ ಬಾಳು ಸಾಧ್ಯವೆ
ಅವಳಿ ದೋಣಿ ಮೇಲೆ ಯಾನ ಯೋಗ್ಯವೇ

ಬಾಳುವಂತ ಹೂವೆ ಬಾಡುವ ಆಸೆ ಏಕೆ
ಹಾಡುವಂತ ಕೋಗಿಲೆ ಅಳುವ ಆಸೆ ಏಕೆ